INFO Breaking
Live
wb_sunny

Breaking News

Belagavi: ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಿಂದ ಹಿಂದಕ್ಕೆ ಸರಿದ ಚನ್ನರಾಜ್ ಹಟ್ಟಿಹೋಳಿ..!

Belagavi: ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಿಂದ ಹಿಂದಕ್ಕೆ ಸರಿದ ಚನ್ನರಾಜ್ ಹಟ್ಟಿಹೋಳಿ..!


ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನದ ಸ್ಪರ್ಧೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತೆಗೆದುಕೊಂಡ‌ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು

ಗುರುವಾರ ಬೆಳಗಾವಿಯ ಕುವೆಂಪು ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಕಳೆದ ಆರು ತಿಂಗಳನಿಂದ ಖಾನಾಪುರ ಪಿಕೆಪಿಎಸ್ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದೇವು. ಅದು ಸತ್ಯ. ಸಾಕಷ್ಟು ಸೊಸೈಟಿ ‌ಮುಂದೆ ಬಂದು ಬೆಂಬಲ‌ ಸೂಚಿಸಿದ್ದರು ಎಂದರು

ಜಿಲ್ಲೆಯ ರಾಜಕೀಯ ಪರಿಸ್ಥಿತಿ ಮತ್ತು ಡಿಸಿಸಿ ಬ್ಯಾಂಕ್ ಮುಂದೆ ಯಾವ ರೀತಿ ನಡೆಸಬೇಕು ಎಲ್ಲ ಹೊಂದಾಣಿಕೆ ಮಾಡಿಕೊಂಡು ಹೋಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಾವು ಒಂದು ಗಂಟೆಗಳ ಕಾಲ‌ ಸುಧೀರ್ಘ ಚರ್ಚೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ನಾವು ಬದ್ಧರಾಗಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಸ್ಪಷ್ಟಣೆ ನೀಡಲಿದ್ದಾರೆ ಎಂದರು

ಮುಂಬರುವ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯಾವ ರೀತಿ ಮಾರ್ಗದರ್ಶನ‌ ಕೊಡುತ್ತಾರೋ ಆ ರೀತಿ ನಡೆಯುತ್ತೇವೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅಂಥ ಸಂದರ್ಭದಲ್ಲಿ ನಮ್ಮ ಬೆಂಬಲಕ್ಕೆ‌ ನಿಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು

ಯಾವುದೇ ಚರ್ಚೆಯಾದರೂ ಸದ್ಯದ ಪರಿಸ್ಥಿತಿಯ ಬಗ್ಗೆ ಯಾವ ನಿರ್ಧಾರ ಸೂಕ್ತ ಎಂಬುದು ತೆಗೆದುಕೊಳ್ಳುವುದು ಸೂಕ್ತ. ಗ್ರಾಮೀಣ ಕ್ಷೇತ್ರದಿಂದ ಇನ್ನೂ ಚರ್ಚೆಯಾಗಿಲ್ಲ. ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧೆ ಮಾಡುವುದು ಇನ್ನೂ ಚರ್ಚೆಯಾಗಿಲ್ಲ. ಖಾನಾಪುರ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಇನ್ನೂ ಗೊತ್ತಿಲ್ಲ. ಆದರೆ ಖಾನಾಪುರ ಜನತೆಗೆ ನೀಡಿದ ಅಭಿವೃದ್ಧಿ ಕೆಲಸ ಮುಂದುವರೆಯುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು

0 Comments:

Responsive

Ads

Here