ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧವಿದೆ-ಸಂಸದ ಯದುವೀರ್ ಒಡೆಯರ್- Mysore
ಬಾನು ಮುಷ್ತಾಕ್ ಕನ್ನಾಡಂಭೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ
ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ ಒಡೆಯರ್ ಹೇಳಿಕೆ ನೀಡಿದ್ದಾರೆ.ಈ ಮೊದಲು ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ,ಅವರ ಹಳೇ ಭಾಷಣ ನಂತರ ನೋಡಿದ್ದೇನೆ.ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು.ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ ಎರಡು ಮಾಡದಿದ್ದರೆ ನನ್ನ ವಿರೋಧ ಇದೆ ಎಂದಿದ್ದಾರೆ.
ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ.ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ.
ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು ಅವರ ಧರ್ಮದ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ.ನಮ್ಮ ಧರ್ಮದಲ್ಲಂತು ಮೂರ್ತಿ ಪೂಜೆ ಶ್ರೇಷ್ಠ.
ಭಕ್ತಯಿಂದ ದೇವರನ್ನ ಪೂಜಿಸಬೇಕು.ಇದಕ್ಕು ಮೊದಲು ತಮ್ಮ ಹಳೆಯ ಹೇಳಿಕೆಗೆ ಸ್ಪಷ್ಟೀಕರಣ ಕೊಡಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಹೇಳಿಕೆ ನೀಡಿದ್ದಾರೆ....
0 Comments: